ಕರ್ನಾಟಕ ಉರ್ದು ಅಕಾಡೆಮಿ ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಜಶ್ನ್-ಎ-ಉರ್ದು ಸಮಾರಂಭವನ್ನು ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಉದ್ಘಾಟಿಸಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಮಾತನಾಡಿ, ಉರ್ದು ಅಕಾಡೆಮಿ ಸರ್ವರ ಸಹಕಾರದೊಂದಿಗೆ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಕಾರ್ಯಕ್ರಮಗಳು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗದೆ, ಇಡೀ ಸಮಾಜಕ್ಕೆ ಪ್ರಯೋಜನ ನೀಡುತ್ತಿವೆ. ಈ ನಿಟ್ಟಿನಲ್ಲಿ ಅಕಾಡೆಮಿಯ ಕಾರ್ಯ ಶ್ಲಾಘನೀಯ ಎಂದು ತಿಳಿಸಿದೆ.
ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ 20 ಸಾಧಕರನ್ನು ಸಮಿತಿ ಮೂಲಕ ಆಯ್ಕೆ ಮಾಡಿ ಗೌರವಿಸಲಾಗಿದೆ. ಪ್ರಶಸ್ತಿ ಪಡೆದ ಎಲ್ಲಾ ಸಾಧಕರಿಗೆ ಅಭಿನಂದನೆಗಳು.
ಈ ಸಮಾರಂಭ ಕೇವಲ ಒಂದು ದಿನದ ಆಚರಣೆಯಲ್ಲ. ಉರ್ದು ಭಾಷೆಯ ಪರಂಪರೆ, ಇತಿಹಾಸ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶವನ್ನು ಇದು ಹೊಂದಿದೆ.
ಭಾಷೆ ಎಂದರೆ ಕೇವಲ ಮಾತಲ್ಲ. ಅದು ಆ ನೆಲದ ಪರಂಪರೆ, ಸಂಸ್ಕೃತಿ, ಜೀವನ ಶೈಲಿ ಮತ್ತು ಮೌಲ್ಯಗಳನ್ನು ಒಳಗೊಂಡ ಸಮಗ್ರ ಸಂಪತ್ತು. ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ @ArshadRizwan , ರಾಜ್ಯಸಭಾ ಸದಸ್ಯರಾದ ಶ್ರೀ @MansoorKhanINC , ಬಿಡಿಎ ಅಧ್ಯಕ್ಷರು ಹಾಗೂ ಶಾಂತಿನಗರ ಕ್ಷೇತ್ರದ ಶಾಸಕರಾದ ಶ್ರೀ @mlanaharis , ಶಿಗ್ಗಾಂವಿ ಕ್ಷೇತ್ರದ ಶಾಸಕರಾದ ಶ್ರೀ ಯಾಸಿರ್ ಅಹ್ಮದ್ ಖಾನ್ ಪಠಾಣ್, ಕಲಬುರಗಿ ಉತ್ತರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ ನಿಯಮಿತದ ಅಧ್ಯಕ್ಷರಾದ ಶ್ರೀಮತಿ ಕನೀಜ್ ಫಾತಿಮಾ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಶ್ರೀ ಯು. ನಿಸಾರ್ ಅಹ್ಮದ್, ಭಾ.ಆ.ಸೇ. (ನಿ.), ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಶ್ರೀ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಶ್ರೀ ಬಿ.ಕೆ. ಅಲ್ತಾಫ್ ಖಾನ್, ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್. ಜುಲ್ಫಿಖಾರ್ ಅಹಮದ್ ಖಾನ್, ಉರ್ದು ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಅಲಿ ಖಾಜಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.